ದೃಷ್ಟಿದೋಷವುಳ್ಳ ಮಕ್ಕಳಿಗೆ ಕನ್ನಡಕ ಉಚಿತ ವಿತರಣೆ

IMG_20250908_153710
ಹನಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಿದರು. ಸಂತೋಷ್ ಕುಮಾರ್, ಡಾ.ಪ್ರತಾಪ್, ಡಾ.ಸನಾ ಹಾಗೂ ನೇತ್ರಾಧಿಕಾರಿ ರವಿ ಇದ್ದರು.
Published on

ಹನಗೋಡು: ದೃಷ್ಟಿದೋಷ ಇರುವ ವಿದ್ಯಾರ್ಥಿಗಳಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಹಾಗೂ ಆರೋಗ್ಯ ಇಲಾಖೆಯ ಆರ್‌ಬಿಎಸ್‌ಕೆ ವತಿಯಿಂದ ಉಚಿತವಾಗಿ ಕನ್ನಡಕಗಳ ವಿತರಣೆ ಮಾಡಲಾಗುವುದೆಂದು ಉಪ ಪ್ರಾಂಶುಪಾಲ ಸಂತೋಷ್ ಕೆ.ಕುಮಾರ್ ಮಾಹಿತಿ ನೀಡಿದರು.

ಹನಗೋಡು ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಮತ್ತು ಅಡುಗೆ ಸಿಬ್ಬಂದಿಗೆ ಸೋಮವಾರ ಆಯೋಜಿಸಿದ್ದ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ 18 ವರ್ಷದೊಳಗಿನ ಶಾಲಾ ಮಕ್ಕಳ ಆರೋಗ್ಯದಲ್ಲಿರುವ ನ್ಯೂನತೆ, ಮಕ್ಕಳ ಬೆಳವಣಿಗೆಯಲ್ಲಿನ ತೊಂದರೆ ಬಗ್ಗೆ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲು ಎಲ್ಲ ಶಾಲೆಗಳಲ್ಲಿ ವೈದ್ಯಕೀಯ ತಪಾಸಣೆ ಮಾಡುತ್ತಿದೆ. ಮಕ್ಕಳ ಆರೋಗ್ಯ ಹಾಗೂ ಬೆಳವಣಿಗೆಯಲ್ಲಿ ತೊಂದರೆ ಕಂಡುಬಂದಲ್ಲಿ ಆರೋಗ್ಯದ ಖರ್ಚು-ವೆಚ್ಚವನ್ನು ಸರ್ಕಾರವೇ ಭರಿಸಿ ಸೂಕ್ತ ಚಿಕಿತ್ಸೆಗೆ ಕ್ರಮ ವಹಿಸಲಾಗುವುದೆಂದು ತಿಳಿಸಿದರು.

ಆರೋಗ್ಯ ತಪಾಸಣಾ ಶಿಬಿರದಲ್ಲಿ ವಿದ್ಯಾರ್ಥಿಗಳ ಎತ್ತರ, ತೂಕ, ಎದೆಯ ಸುತ್ತಳತೆ, ನೇತ್ರ ತಪಾಸಣೆ, ರಕ್ತ ತಪಾಸಣೆ ಮತ್ತು ಎಚ್‌ಬಿ ತಪಾಸಣೆ ಮಾಡಲಾಯಿತು. ತಾಲೂಕು ಆರ್‌ಬಿಎಸ್‌ಕೆ ತಂಡದ ವೈದ್ಯರಾದ ಡಾ.ಪ್ರತಾಪ್, ಡಾ.ಸನಾ, ನೇತ್ರಾಧಿಕಾರಿ ರವಿ ಆರೋಗ್ಯ ತಪಾಸಣೆ ನಡೆಸಿದರು.

ಶಿಕ್ಷಕರಾದ ವೀರಣ್ಣ ಕರಡಿ, ಛಾಯಾಮಣಿ, ಭಾನುಮತಿ, ಜಯಂತಿ, ಮೇಘಶ್ರೀ, ವರ್ಷಾ, ಸೌಮ್ಯಾ, ಜಯಲಕ್ಷ್ಮೀ, ರಘುಪತಿ ಸೇರಿದಂತೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net