

ಮೈಸೂರು: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಪ್ರಯುಕ್ತ ನಗರದ ನೈಋತ್ಯ ರೈಲ್ವೆ ಮ್ಯೂಸಿಯಂನಲ್ಲಿ ಜ.24 ರಂದು ಹೆಣ್ಣು ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಮಂಗಳವಾರ ಮ್ಯೂಸಿಯಂಗೆ ನೀಡಲಾಗಿದ್ದ ರಜೆಯನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಪ್ರಯುಕ್ತ ರದ್ದುಪಡಿಸಲಾಗಿದೆ. ಅಂದು ಬೆಳಗ್ಗೆ 10 ರಿಂದ ಸಂಜೆ 5.30ರವರೆಗೆ ಒಬ್ಬರು ಪಾಲಕರೊಂದಿಗೆ ಹೆಣ್ಣು ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.