ಹಿರಿಯ ನಾಗರಿಕರಿಗೆ ಉಚಿತ ಸಲಕರಣೆ ವಿತರಣೆ

shutterstock_239451406
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯದ ಅಡಿಪ್ ಯೋಜನೆಯಡಿ ದಿವ್ಯಾಂಗರಿಗೆ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಣಾ ಸಮಾರಂಭವನ್ನು ಜ. 19ರಂದು ಬೆಳಗ್ಗೆ 11.30 ಗಂಟೆಗೆ ನಗರದ ವಿದ್ಯಾಗಿರಿಯ ಜೆ.ಎಸ್.ಎಸ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಕೇಂದ್ರ ಗ್ರಾಹಕ ವ್ಯವಹಾರಗಳ ಆಹಾರ ಹಾಗೂ ಸಾರ್ವಜನಿಕ ವಿತರಣೆ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ರಾಜ್ಯ ಸಚಿವ ಬನವಾರಿಲಾಲ್ ವರ್ಮ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಅರವಿಂದ ಚಂದ್ರಕಾ0ತ ಬೆಲ್ಲದ ಅಧ್ಯಕ್ಷತೆ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net