ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆ : ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದ ತಜ್ಞೆ ಡಾ.ನಯನ ಆಶಯ

New Project (39)
Published on

ಮೂಲ್ಕಿ: ಸೇವಾ ಸಂಸ್ಥೆಗಳು ಗ್ರಾಮೀಣ ಪ್ರದೇಶದಲ್ಲಿ ಉಚಿತ ಆರೋಗ್ಯ ಸೇವಾ ಕಾರ್ಯಕ್ರಮಗಳ ಮೂಲಕ ಜನಸೇವೆ ನಡೆಸುತ್ತಿರುವುದು ಅಭಿನಂದನೀಯ ಎಂದು ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದ ತಜ್ಞೆ ಡಾ.ನಯನ ಹೇಳಿದರು.

ತೋಕೂರು ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲದ ಆಶ್ರಯದಲ್ಲಿ ಉಚಿತ ಕಣ್ಣಿನ ಹಾಗೂ ಬಿಪಿ ಶುಗರ್ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಗೌರವಾಧ್ಯಕ್ಷ ಗುರುರಾಜ್ ಎಸ್.ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಪಡುಪಣಂಬೂರು ಗ್ರಾಪಂ ಉಪಾಧ್ಯಕ್ಷ ಹೇಮನಾಥ ಅಮಿನ್, ಸದಸ್ಯ ಮೋಹನ್ ದಾಸ್, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕ ಗೌತಮ್ ಜೈನ್, ಉದ್ಯಮಿ ಜಯಕೃಷ್ಣ, ಕೆಮ್ರಾಲ್ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿ ಮಾರ್ಗರೇಟ್ ಸುದರ್ಶನಿ, ಫೇಮಸ್ ಕ್ಲಬ್ ಅಧ್ಯಕ್ಷ ಸಂಪತ್ ಶೆಟ್ಟಿ, ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಮೋಹನ್ ಸ್ವಾಗತಿಸಿದರು. ಶರೀಫ್ ಕಾರ್ಯಕ್ರಮ ನಿರೂಪಿಸಿದರು. ಪ್ರೇಮಲತಾ ಯೋಗೀಶ್ ವಂದಿಸಿದರು. ಸಂಸ್ಥೆಯ ಸಹಕಾರದಿಂದ ಸುಮಾರು 60 ಮಂದಿಗೆ ನೇತ್ರ ಪರೀಕ್ಷೆ ಸಹಿತ ಉಚಿತ ಕನ್ನಡಕ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net