ಉಚಿತ ಕಣ್ಣಿನ ತಪಾಸಣೆ ಶಿಬಿರ ಏ. 1ರಂದು

eye camp
Published on

ಹುಬ್ಬಳ್ಳಿ: ಇಲ್ಲಿಯ ಕೊಯಿನ್ ರಸ್ತೆಯ ಕೆಎಲ್‌ಇ ಹುಬ್ಬಳ್ಳಿ ಕೋ-ಆಪರೇಟಿವ್ ಹಾಸ್ಪಿಟಲ್ ಸೊಸೈಟಿಯಲ್ಲಿ ಏ. 1ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ.
ತಪಾಸಣೆ ನಂತರ ಅರ್ಹರಿಗೆ ಕನ್ನಡಕವನ್ನು ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net