

ಗಂಗೊಳ್ಳಿ: ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಮಣಿಪಾಲ ಕೆಎಂಸಿ ಸಹಯೋಗದೊಂದಿಗೆ ನೇತ್ರ ತಪಾಸಣೆ ಉಚಿತ ಶಿಬಿರ ಗಂಗೊಳ್ಳಿ ಎಸ್ವಿ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ಒಳಾಂಗಣ ಸಭಾಂಗಣದಲ್ಲಿ ಭಾನುವಾರ ನಡೆಯಿತು.
ಗಂಗೊಳ್ಳಿ ರೋಟರಿ ಕ್ಲಬ್ ಹಿರಿಯ ಸದಸ್ಯ ಉದಯಶಂಕರ ರಾವ್ ಶಿಬಿರ ಉದ್ಘಾಟಿಸಿದರು. ಅಧ್ಯಕ್ಷೆ ಚಂದ್ರಕಲಾ ಎಸ್.ತಾಂಡೇಲ್ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲದ ತಜ್ಞ ವೈದ್ಯ ಡಾ.ಯತಾರ್ಥ್ ಕಣ್ಣಿನ ಆರೋಗ್ಯ ಹಾಗೂ ಸಮಸ್ಯೆ ಬಗ್ಗೆ ಮಾತನಾಡಿದರು.
ಚಂದ್ರಕಲಾ ಎಸ್.ತಾಂಡೇಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ವಂದಿಸಿದರು. ಮಾಜಿ ಅಧ್ಯಕ್ಷ ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರೂಪಿಸಿದರು.