

ಹುಬ್ಬಳ್ಳಿ: ಕೆಎಲ್‌ಇ ಜೆಜಿಎಂಎಂ ಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಇಲ್ಲಿಯ ಕೊಯಿನ್ ರಸ್ತೆಯ ದಿ ಹುಬ್ಬಳ್ಳಿ ಕೋ -ಆಪರೇಟಿವ್ ಆಸ್ಪತ್ರೆಯಲ್ಲಿ ಸೆ. 1ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಉಚಿತ ನೇತ್ರ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ತಪಾಸಣೆ ನಂತರ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಗುವುದು ಎಂದು ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.