

ಬನ್ನೂರು: ರೋಟರಿ ಸಂಸ್ಥೆ, ಕಾನ್‌ಸಿಂಗ್‌ಜೀ ರಾಜ್‌ಪುರೋಹಿತ್, ಶ್ರೀ ಗೌರಿದೇವಿ, ಲಯನ್ಸ್ ಕ್ಲಬ್ ಆಫ್ ಈರೋಡ್, ಕಾವೇರಿ ಟ್ರಸ್ಟ್, ಕೊಯಮತ್ತೂರು ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಪಟ್ಟಣದ ಬಸ್ ನಿಲ್ದಾಣದ ಸಮೀಪದ ರೋಟರಿ ಶಾಲೆ ಆವರಣದಲ್ಲಿ ಮೇ 10ರಂದು ಮಧ್ಯಾಹ್ನ 1 ರಿಂದ 4 ಗಂಟೆವರೆಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಮಾಜಿ ಅಧ್ಯಕ್ಷ ಡಾ.ಮಹೇಂದ್ರಸಿಂಗ್ ಕಾಳಪ್ಪ ತಿಳಿಸಿದ್ದಾರೆ.
ತಪಾಸಣೆಗೆ ಬರುವವರು ಆಧಾರ್ ಕಾರ್ಡ್‌ನ ಜೆರಾಕ್ಸ್ ಪ್ರತಿ, ಮೊಬೈಲ್ ನಂಬರ್ ತರಬೇಕಿದೆ. ಕಣ್ಣಿನ ಪೊರೆ, ಗ್ಲಾಕೋಮ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರ ದೃಷ್ಟಿ ದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆ ಕಣ್ಣು, ರಾತ್ರಿ ಕುರುಡುತನಕ್ಕೆ ಚಿಕಿತ್ಸೆ ನೀಡಲಾಗುವುದು. ಕಣ್ಣಿನಲ್ಲಿ ಪೊರೆ ಇರುವವರನ್ನು ಕೊಯಮತ್ತೂರಿನ ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ ಶಸ್ತ್ರಚಿಕಿತ್ಸೆ ಮಾಡಿಸಿ ಮತ್ತೆ ಸ್ವಸ್ಥಳಕ್ಕೆ ತಂದು ಬಿಡಲಾಗುವುದು.ಸುತ್ತಮುತ್ತಲಿನ ಗ್ರಾಮಸ್ಥರು, ಕಣ್ಣಿನ ಅಂಧತ್ವ ಇರುವವರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.