ಇಂದು ನೇತ್ರ ಉಚಿತ ತಪಾಸಣೆ ಶಿಬಿರ

TRAINEE JOURNALIST, RHONA PARRY, HAVING HER EYES TESTED.
TRAINEE JOURNALIST, RHONA PARRY, HAVING HER EYES TESTED.
Published on

ಗುಂಡ್ಲುಪೇಟೆ: ಪಟ್ಟಣದ ಸ್ಮಾರ್ಟ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಸಮಿತಿ ವತಿಯಿಂದ ಮಾ. 1ರಂದು ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಣ್ಣಿನ ಸಮಸ್ಯೆಗಳಾದ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಗೀಜು ಬರುವುದು, ಹತ್ತಿರ ಮತ್ತು ದೂರದೃಷ್ಟಿ ದೋಷ, ವಾರೆಕಣ್ಣು, ರಾತ್ರಿ ಕುರುಡುತನದ ತಪಾಸಣೆಯನ್ನು ಶನಿವಾರ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆ ತಜ್ಞ ವೈದ್ಯರು ನಡೆಸಲಿದ್ದಾರೆ.

ಶಸ್ತ್ರಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಕೊಯಮತ್ತೂರಿಗೆ ಕರೆದೊಯ್ದು ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ಆದ್ದರಿಂದ ಕಣ್ಣಿನ ತೊಂದರೆಯಿರುವ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ವಿವರಗಳಿಗೆ ಮೊ: 9481820814, 8971872924 ಸಂಪರ್ಕಿಸುವಂತೆ ಅನುಗ್ರಹ ಫೌಂಡೇಷನ್‌ನ ಕೆ.ರಮೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net