100ಕ್ಕೂ ಹೆಚ್ಚು ಜನರಿಗೆ ಕಣ್ಣಿನ ಉಚಿತ ತಪಾಸಣೆ

100ಕ್ಕೂ ಹೆಚ್ಚು ಜನರಿಗೆ ಕಣ್ಣಿನ ಉಚಿತ ತಪಾಸಣೆ
Published on

ಹುಣಸೂರು: ನಗರದ ಡೀಡ್ ಸಂಸ್ಥೆ, ಸದೃಢ ಚಾರಿಟಬಲ್ ಟ್ರಸ್ಟ್ ಮತ್ತು ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಮಂಗಳವಾರ ಬಿಳಿಕೆರೆ ಮತ್ತು ಹುಣಸೂರು ನಗರದಲ್ಲಿ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣಾ ಶಿಬಿರದಲ್ಲಿ 100ಕ್ಕೂ ಹೆಚ್ಚು ಜನ ತಪಾಸಣೆಗೊಳಗಾದರೆ 50 ಜನ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಯಿತು.

ಹುಣಸೂರು ನಗರದ ಡೀಡ್ ಸಂಸ್ಥೆ ಆವರಣದಲ್ಲಿ ಡೀಡ್ ನಿರ್ದೇಶಕ ಡಾ.ಎಸ್.ಶ್ರೀಕಾಂತ್ ಮಾತನಾಡಿ, ಹುಣಸೂರು ನಗರ ಮತ್ತು ಬಿಳಿಕೆರೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏಕಕಾಲದಲ್ಲಿ ಎರಡು ತಂಡಗಳು ಕಾರ್ಯ ನಿರ್ವಹಿಸಿದ್ದು, ಆದಿವಾಸಿ ಗಿರಿಜನರು ಮತ್ತು ಗ್ರಾಮೀಣರು ಶಿಬಿರದ ಸದುಪಯೋಗ ಪಡೆದುಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ಅವಶ್ಯಕತೆ ಹೊಂದಿದವರನ್ನು ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಬೆಂಗಳೂರಿಗೆ ಕರೆದೊಯ್ದು ಉಚಿತವಾಗ ಶಸ್ತ್ರಚಿಕಿತ್ಸೆ ಮಾಡಿಕೊಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಆಸ್ಪತ್ರೆಯ ಸಂಯೋಜಕ ಶ್ರೀಕಂಠ ಮೂರ್ತಿ ಡಾ. ಕೃತಿಕಾ ನೇತ್ರ, ಸದೃಢ ಚಾರಿಟಬಲ್ ಟ್ರಸ್ಟ್‌ನ ಉಷಾ, ಮೋಹನ್, ಯಶ್ವಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net