ಉಚಿತ ನೇತ್ರ ತಪಾಸಣಾ ಶಿಬಿರ 12ರಂದು

eye camp
Published on

ಹುಬ್ಬಳ್ಳಿ: ವಿಶ್ವ ದೃಷ್ಟಿ ದಿನದ ಅಂಗವಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರೇರಿತ ಕ್ಷಮತಾ ಸೇವಾ ಸಂಸ್ಥೆ, ಡಾ.ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಆಶ್ರಯದಲ್ಲಿ ಅ. 12ರಂದು ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಅಶೋಕ ನಗರದ ಡಾ. ಡಿ. ಎಸ್. ರ್ಕ ಕನ್ನಡ ಭವನದಲ್ಲಿ ಏರ್ಪಡಿಸಲಾಗಿದೆ. ಪೌರಕಾರ್ವಿುಕರಿಗಾಗಿಯೇ ಈ ಶಿಬಿರ ಏರ್ಪಾಡಾಗಿದೆ. ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ. ಮೇಯರ್ ವೀಣಾ ಬರದ್ವಾಡ ಉದ್ಘಾಟಿಸುವರು. ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಕ್ಷಮತಾ ಸಂಚಾಲಕ ಗೋವಿಂದ ಜೋಶಿ, ಡಾ.ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ಶ್ರೀನಿವಾಸ ಜೋಶಿ ಉಪಸ್ಥಿತರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net