ಮೈಸೂರು: ವಿಜಯನಗರ ಸಾಂಸ್ಕೃತಿಕ ಸಂಸ್ಥೆಯಿಂದ ಜೂ.17ರಂದು ಪಡುವಾರಹಳ್ಳಿಯಲ್ಲಿ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.
ಶ್ರೀವರಸಿದ್ಧಿ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಬಿರ ಆಯೋಜಿಸಲಾಗಿದೆ. ಪಡುವಾರಹಳ್ಳಿ ಗ್ರಾಮಾಭ್ಯುದಯ ಟ್ರಸ್ಟ್, ರೋಟರಿ ಪಂಚಶೀಲ ಸಹಯೋಗದಲ್ಲಿ ಆಯೋಜಿಸಿರುವ ಶಿಬಿರದಲ್ಲಿ ಕಣ್ಣಿನ ತಪಾಸಣೆ ನಡೆಸಿ ಅಗತ್ಯ ಇರುವವರಿಗೆ ಅದೇ ದಿನ ನಗರದ ಎಂಆರ್‌ಸಿ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗುವುದು. ಮಾಹಿತಿಗೆ ಮೊಬೈಲ್ ಸಂಖ್ಯೆ 9972962665 ಅನ್ನು ಸಂಪರ್ಕಿಸುವಂತೆ ವಿಜಯನಗರ ಸಾಂಸ್ಕೃತಿಕ ಸಂಸ್ಥೆ ಕಾರ್ಯದರ್ಶಿ ರಾಮಕೃಷ್ಣ ಹೇಳಿಕೆಯಲ್ಲಿ ಕೋರಿದ್ದಾರೆ.