

ಸುಳ್ಯ: ರೋಟರಿ ಕ್ಲಬ್ ಸುಳ್ಯ ನೇತೃತ್ವದಲ್ಲಿ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಹಾಗೂ ಇನ್ನಿತರ ಸಂಸ್ಥೆಗಳ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ಡಿ.29ರಂದು ಬೆಳಗ್ಗೆ 9ರಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ನಡೆಯಲಿದೆ. ಸುಳ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಸಹಕಾರಿ ರತ್ನ ಸವಣೂರು ಸೀತಾರಾಮ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷೆ ಯೋಗಿತಾ ಗೋಪಿನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಉಚಿತ ತಪಾಸಣೆಯೊಂದಿಗೆ ಅಗತ್ಯವುಳ್ಳವರಿಗೆ ಉಚಿತವಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.