ಕಣ್ಣಿನ ಉಚಿತ ತಪಾಸಣಾ ಶಿಬಿರ ನಾಳೆ

Published on

ಗುಂಡ್ಲುಪೇಟೆ: ಪಟ್ಟಣದ ಗುರು ಭವನದಲ್ಲಿ ಮೇ 29ರ ಬುಧವಾರ ಕೊಯಮತ್ತೂರಿನ ಅರವಿಂದ ಕಣ್ಣಾಸ್ಪತ್ರೆಯ ನೆರವಿನಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಸುರಾನ ಕಾಲೇಜು ಗ್ರಾಮೀಣ ಯೋಜನೆ ಮತ್ತು ಕಾಲೇಜು, ರೋಟ್ರಾಕ್ಟ್ ಕ್ಲಬ್, ಅನುಗ್ರಹ ಫೌಂಡೇಷನ್, ಲಯನ್ಸ್ ಕ್ಲಬ್ ಆಫ್ ಈರೋಡ್ ಈಸ್ಟ್ ಇವರ ಸಹಯೋಗದಲ್ಲಿ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ತಜ್ಞವೈದ್ಯರು ತಪಾಸಣೆ ನಡೆಸುವರು.

ಶಿಬಿರದಲ್ಲಿ ಕಣ್ಣಿನ ಪೊರೆ, ಗ್ಲಾಕೋಮಾ, ನೀರು ಸೋರುವಿಕೆ, ಕಣ್ಣಿನಲ್ಲಿ ಗೀಜು ಬರುವುದು, ಹತ್ತಿರ ಮತ್ತು ದೂರ ದೃಷ್ಟಿ ದೋಷ, ಕಣ್ಣಿನಲ್ಲಿ ಬಿರುಕು ಉಂಟಾಗುವುದು, ವಾರೆಗಣ್ಣು, ರಾತ್ರಿ ಕುರುಡುತನದ ಬಗ್ಗೆ ಪರಿಕ್ಷಿಸಲಾಗುತ್ತದೆ. ಶಸ್ತ್ರಚಿಕಿತ್ಸೆ ಅಗತ್ಯವಿದ್ದರನ್ನು ಉಚಿತವಾಗಿ ಕೊಯಮತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಮಾಡಿಕೊಡಲಾಗುತ್ತದೆ. ಆದ್ದರಿಂದ ತಾಲ್ಲೂಕಿನ ಜನತೆ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅನುಗ್ರಹ ಫೌಂಡೇಷನ್ ಸಂಚಾಲಕ ಕೆ.ರಮೇಶ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ 9481820814, 8971872924 ಸಂಪರ್ಕಿಸುವಂತೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net