ಪಾಲಿಬೆಟ್ಟದಲ್ಲಿ ನೇತ್ರ ಉಚಿತ ತಪಾಸಣೆ ಇಂದು

Published on

ಸಿದ್ದಾಪುರ: ಪಾಲಿಬೆಟ್ಟ ಲಯನ್ಸ್ ಕ್ಲಬ್ ಹಾಗೂ ಮಡಿಕೇರಿಯ ಇಕ್ಷಾ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ನ.18ರಂದು ನೇತ್ರ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ಪಾಲಿಬೆಟ್ಟದ ಲಯನ್ಸ್ ಸೇವಾ ಭವನ ಅನುಗ್ರಹದಲ್ಲಿ ಶಿಬಿರ ನಡೆಯಲಿದ್ದು ಡಾ. ಎ.ಜಿ.ಚಿನ್ನಪ್ಪ ಕಣ್ಣಿನ ತಪಾಸಣೆ ನಡೆಸಲಿದ್ದಾರೆ. ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ಮತ್ತು ಕನ್ನಡಕವನ್ನು ನೀಡಲಾಗುವುದು. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಲಯನ್ಸ್ ಕ್ಲಬ್ ಅಧ್ಯಕ್ಷ ಅನಂತರಾಂ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net