

ಬೆಳ್ತಂಗಡಿ: ಕೋಟಿ-ಚೆನ್ನಯ ಫ್ರೆಂಡ್ಸ್ ಸೇವಾ ಟ್ರಸ್ಟ್ ಕರಾಯ, ತಣ್ಣೀರುಪಂತ ಸಿಎ ಬ್ಯಾಂಕ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಸಹಯೋಗದಲ್ಲಿ ಕಲ್ಲೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು-ಪುತ್ತೂರು ಇವರಿಂದ ಕಣ್ಣಿನ ತಪಾಸಣಾ ಉಚಿತ ಶಿಬಿರ ನಡೆಯಿತು.
ತಣ್ಣೀರುಪಂತ ಸಿಎ ಬ್ಯಾಂಕ್ ಅಧ್ಯಕ್ಷ ಜಯಾನಂದ ಕಲ್ಲಾಪು ಉದ್ಘಾಟಿಸಿದರು. ಶ್ರೀಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ, ತಣ್ಣೀರುಪಂತ ಸಿಎ ಬ್ಯಾಂಕ್ ಉಪಾಧ್ಯಕ್ಷ ಸುನೀಲ್ ಅಣವು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್, ನಿರ್ದೇಶಕ ರೋಹಿತ್ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ ಪ್ರವೀಣ ಕುಮಾರ್, ಕೋಟಿ-ಚೆನ್ನಯ ಸೇವಾ ಟ್ರಸ್ಟ್ ಅಧ್ಯಕ್ಷ ದುರ್ಗಾಪ್ರಸಾದ್ ಮುಂತಾದವರು ಉಪಸ್ಥಿತರಿದ್ದರು. ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಯರಾಜ್ ಜೈನ್ ನಿರೂಪಿಸಿದರು.