ನೇತ್ರ ತಪಾಸಣೆ

Published on

ಹುಬ್ಬಳ್ಳಿ: ಇಲ್ಲಿಯ ಕೋಯಿನ್ ರಸ್ತೆಯ ಹುಬ್ಬಳ್ಳಿ ಕೋ ಆಪರೇಟಿವ್ ಹಾಸ್ಪಿಟಲ್ ಶತಮಾನೋತ್ಸವ ವರ್ಷಾಚರಣೆ ಹಿನ್ನೆಲೆಯಲ್ಲಿ ಕೆಎಲ್​ಇ ಜೆಜಿಎಂಎಂ ಮೆಡಿಕಲ್ ಕಾಲೇಜ್ ಸಹಯೋಗದೊಂದಿಗೆ ಅ. 7ರಂದು ಬೆಳಗ್ಗೆ 10ಕ್ಕೆ ಉಚಿತ ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತ ಕನ್ನಡಕ ನೀಡಲಾಗುವುದು ಎಂದು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಲಿಂಗರಾಜ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net