ಜಿಲ್ಲೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜನೆ

3ss1udgatane dho
Published on

ಶನಿವಾರಸಂತೆ: ಜನ ಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಆಯುಷ್ಮಾನ್ ಹಾಗೂ ಆರೋಗ್ಯ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಪ್ರತಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಹೇಳಿದರು.


ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಶಿಬಿರ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ ಇದೆ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.


ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ನಂಜುಂಡಯ್ಯ ಮಾತನಾಡಿ, ಡಿಸೆಂಬರ್ ಅಂತ್ಯದವರೆಗೂ ವಿವಿಧ ಆರೋಗ್ಯ ಕೇಂದ್ರದಲ್ಲಿ ಶಿಬಿರ ಹಮ್ಮಿಕೊಂಡಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದರು.


ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್, ಡಾ.ಇಂದೂಧರ್, ಡಾ.ಲೋಕೇಶ್, ಡಾ.ಪುರುಷೋತ್ತಮ್, ಮಂಜುಳಾ, ಸರ್ದಾರ್ ಅಹಮ್ಮದ್, ಶರತ್ ಶೇಖರ್, ಸರೋಜಾ ಶೇಖರ್, ಎಸ್.ಪಿ.ಭಾಗ್ಯಾ, ಪಿಡಿಒ ಹರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net