ಕಗ್ಗಳ ಗ್ರಾಮದಲ್ಲಿ ಆರೋಗ್ಯ ಉಚಿತ ಶಿಬಿರ

15-OCT-GPT-4
ಗುಂಡ್ಲುಪೇಟೆ ತಾಲೂಕಿನ ಕಗ್ಗಳ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡಿದ್ದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
Published on

ಗುಂಡ್ಲುಪೇಟೆ: ತಾಲೂಕಿನ ತೆರಕಣಾಂಬಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕಗ್ಗಳ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಬುಧವಾರ ಆರೋಗ್ಯ ಉಚಿತ ಶಿಬಿರ ಆಯೋಜಿಸಲಾಗಿತ್ತು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್ ನೇತೃತ್ವದಲ್ಲಿ ಗ್ರಾಮದ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ 148 ಫಲಾನುಭವಿಗಳು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕ್ಷಯ ರೋಗಕ್ಕೆ ಸಂಬಂಧಪಟ್ಟಂತೆ ಎಕ್ಸರೇ ಮಾಡಲಾಯಿತು. ಸಂಶಯಾಸ್ಪದ ಕಫದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಯಿತು. ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಮುಂತಾದ ನಾನಾ ಆರೋಗ್ಯ ಸಂಬಂಧಿತ ಪರೀಕ್ಷೆಗಳನ್ನು ನಡೆಸಿ ರೋಗಿಗಳಿಗೆ ಸ್ಥಳದಲ್ಲಿಯೇ ಔಷಧ ಹಾಗೂ ಚಿಕಿತ್ಸೆ ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಷಾ, ತೆರಕಣಾಂಬಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಾಶ್ವತ್, ಆರೋಗ್ಯ ನಿರೀಕ್ಷಕರಾದ ನಾಗೇಂದ್ರ, ಸುದರ್ಶನ್, ಚಂದ್ರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net