

ಶಿರ್ವ: ಸಾಲ್ಮರ ಕೃಷ್ಣವೇಣಿ ಆಯುರ್ವೇದ ಚಿಕಿತ್ಸಾ ಮತ್ತು ಸ್ವಾಸ್ಥ್ಯ ಕೇಂದ್ರ, ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ಮತ್ತು ಇನ್ನಂಜೆ ಯುವಕ ಮಂಡಲದ ಸಹಯೋಗದಲ್ಲಿ ಆರೋಗ್ಯ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜೂ.1ರಂದು ನಡೆಯಲಿದೆ.
ಪಡುಬಿದ್ರಿ ಅಂಚನ್ ಆಯುರ್ವೇದ ಇಂಡಸ್ಟ್ರೀಸ್‌ನ ಆಡಳಿತ ನಿರ್ದೇಶಕ ಡಾ.ಟಿ.ನಾರಾಯಣ ಅಂಚನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮುನಿಯಾಲು ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಂಶುಪಾಲ ಡಾ.ಸತ್ಯನಾರಾಯಣ, ಇನ್ನಂಜೆ ಯುವಕ ಮಂಡಲ ಅಧ್ಯಕ್ಷ ಮಧುಸೂದನ್ ಆಚಾರ್ಯ ಭಾಗವಹಿಸುವರು. ಸಿಎ ಹರಿದಾಸ್ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಿಬಿರದಲ್ಲಿ ಎಲ್ಲ ರೀತಿಯ ಆರೋಗ್ಯ ಸಮಸ್ಯೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಶಿಬಿರದ ಸಂಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.