

ವಿಜಯವಾಣಿ ಸುದ್ದಿಜಾಲ ಶಿರ್ವ
ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯ ಒದಗಿಸಿದಾಗ ದೇಶ ಅಭಿವೃದ್ಧಿಯಾಗಲಿದೆ. ಆರೋಗ್ಯ ಸೇವೆಯಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಕೊಡುಗೆ ಅಮೋಘ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಶಿರ್ವದ ಹಿಂದು ಜೂನಿಯರ್ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ದಶಮಾನೋತ್ಸವ ಪ್ರಯುಕ್ತ ಮಂಗಳೂರಿನ ನಿಟ್ಟೆ ವಿಶ್ವವಿದ್ಯಾಲಯದ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ, ಎ.ಬಿ.ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯ ಮತ್ತು ಶಿರ್ವದ ಜಸ್ಟೀಸ್ ಕೆ.ಎಸ್.ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ಶಿರ್ವದ ಹಿಂದು ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ನಿಟ್ಟೆ ವಿವಿ ಉಪಾಧ್ಯಕ್ಷ ಪ್ರೊ.ಡಾ.ಸತೀಶ್ ಕುಮಾರ್ ಭಂಡಾರಿ, ವಿದ್ಯಾವರ್ಧಕ ಸಂಘ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ರಾಜ್‌ಗೋಪಾಲ್ ಕೆ., ಹಳೇ ವಿದ್ಯಾರ್ಥಿ ಸಂಘ ಸ್ಥಾಪಕ ಅಧ್ಯಕ್ಷ ಸಚ್ಚಿದಾನಂದ ಹೆಗ್ಡೆ, ಎ.ಬಿ.ಶೆಟ್ಟಿ ಸ್ಮಾರಕ ದಂತ ಮಹಾವಿದ್ಯಾಲಯದ ಡಾ.ದೀಶಾ, ಜಸ್ಟೀಸ್ ಕೆ.ಎಸ್.ಹೆಗ್ಡೆ ಗ್ರಾಮೀಣ ಆರೋಗ್ಯ ಕೇಂದ್ರದ ಡಾ.ಸಜ್ಞಾ ಎಂ.ಶೆಟ್ಟಿ, ಡಾ.ನಿವೇದಿತಾ ಮೂರ್ತಿ, ಪ.ಪೂ. ಕಾಲೇಜು ಪ್ರಾಂಶುಪಾಲ ಭಾಸ್ಕರ ಎ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ವಸಂತಿ ಉಪಸ್ಥಿತರಿದ್ದರು. ಸಂಸ್ಥೆಗಳ ಎನ್‌ಎಸ್‌ಎಸ್. ಘಟಕದ ಸ್ವಯಂಸೇವಕರು, ರೆಡ್‌ಕ್ರಾಸ್ ಘಟಕ ಸ್ವಯಂಸೇವಕರು, ಹಳೇ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಸಹಕರಿಸಿದರು. ರಮಾನಂದ ಶೆಟ್ಟಿಗಾರ್ ಸ್ವಾಗತಿಸಿದರು. ನವೀನ್ ಶೆಟ್ಟಿ ವಂದಿಸಿದರು. ಯಶೋದಾ ಕಾರ್ಯಕ್ರಮ ನಿರೂಪಿಸಿದರು.
ಹಿರಿಯ ತಜ್ಞ ವೈದ್ಯರನ್ನು ಸನ್ಮಾನಿಸಲಾಯಿತು. ಶಿಬಿರಕ್ಕೆ 176 ಮಂದಿ ಆಗಮಿಸಿದ್ದರು. ಅಗತ್ಯವುಳ್ಳವರಿಗೆ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಮಂಗಳೂರಿನ ಜಸ್ಟೀಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಉಚಿತವಾಗಿ ಮಾಡಲು ವ್ಯವಸ್ಥೆ ಮಾಡಲಾಯಿತು.