ನಾಡಿದ್ದು ಆರೋಗ್ಯ ತಪಾಸಣೆ ಉಚಿತ ಶಿಬಿರ

17GPB1
Published on

ಘಟಪ್ರಭಾ: ಸಮೀಪದ ಕೊಣ್ಣೂರ-ಮರಡಿಮಠದ ಶ್ರೀ ಕಾಡಸಿದ್ಧೇಶ್ವರ ಮಠದ ಆವರಣದಲ್ಲಿ ಆ.20ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಕಾಡಸಿದ್ಧೇಶ್ವರ ಶಿಕ್ಷಣ ಸಮಿತಿ, ಜೆ.ಜಿ.ಸಹಕಾರಿ ಆಸ್ಪತ್ರೆ ಹಾಗೂ ಭಕ್ತರ ಸಂಯುಕ್ತಾಶ್ರಯದಲ್ಲಿ ಲಿಂ.ಡಾ.ಅದೃಶ್ಯ ಗುರುಸಿದ್ಧೇಶ್ವರ ಸ್ವಾಮೀಜಿ 9ನೇ ಪುಣ್ಯಸ್ಮರಣೆ ಅಂಗವಾಗಿ ಆರೋಗ್ಯ ತಪಾಸಣೆ ಉಚಿತ ಶಿಬಿರ ಹಾಗೂ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶ್ರಾವಣ ಮಾಸದ ಅಂಗವಾಗಿ ಮರಡಿಮಠದಲ್ಲಿ ಗಣೇಶ ಚತುರ್ಥಿ ವರೆಗೆ ಪ್ರತಿದಿನ ಸಂಜೆ 7 ಗಂಟೆಗೆ ಗದುಗಿನ ಸಿದ್ದಲಿಂಗಯ್ಯ ಶಾಸಿ ಸೋಮನಕಟ್ಟೆ ಅವರು ಪ್ರವಚನ ನೀಡುವರು. ಮಹಾಪ್ರಸಾದ ಏರ್ಪಡಿಸಲಾಗಿದೆ ಎಂದು ಡಾ.ಪವಾಡೇಶ್ವರ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net