ಉಚಿತ ಆರೋಗ್ಯ ತಪಾಸಣಾ ಶಿಬಿರ

22ark1
Published on
  • ಅರಕಲಗೂಡು : ತಾಲೂಕಿನ ದುಮ್ಮಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಆರೋಗ್ಯ ಇಲಾಖೆ, ಸಂತೆಮರೂರು ಗ್ರಾಮ ಪಂಚಾಯತಿ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಬುಧವಾರ ಉಚಿತ ಅರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

  • ಸಾರ್ವಜನಿಕ ಆಸ್ಪತ್ರೆಯ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕ ಪರಶುರಾಮ ಶಿರೂರ ಮಾತನಾಡಿ, ಜಿಲ್ಲೆಯಲ್ಲಿ 100 ಹೈರಿಸ್ಕ್ ಇರುವಂತಹ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ವಲಸಿಗರು ಹಾಗೂ ಟ್ರಕ್ ಚಾಲಕರು ಸೇರಿದಂತೆ ವಿವಿಧ ವರ್ಗದ ಜನರಿಗೆ ಎಚ್‌ಐವಿ ತಪಾಸಣೆಗಳನ್ನು ನಡೆಸಿ ಕಾಯಿಲೆ ಹರಡುವ ವಿಧಾನ ಹಾಗೂ ಇದು ಬರದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸ ಕಾರ್ಯ ನಡೆಸಲಾಗುತ್ತಿದೆ ಎಂದರು.

  • ಗ್ರಾಪಂ ಪಿಡಿಒ ರಾಜೇಗೌಡ, ಕಾರ್ಯದರ್ಶಿ ಮಂಜುನಾಥ್, ಐಸಿಟಿಸಿ ಪ್ರಯೋಗಶಾಲಾ ತಂತ್ರಜ್ಞೆ ಗೌರಮ್ಮ, ಎನ್‌ಸಿ ಡಿ ವಿಭಾಗದ ಆಪ್ತಸಮಾಲೋಚಕ ಉಮೇಶ್, ಶುಶ್ರೂಷಕಿ ಲಲಿತಾ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಘದ ಕ್ಷೇತ್ರ ಕಾರ್ಯಕರ್ತ ಚಂದ್ರಶೇಖರ್ ಆಶಾ ಕಾರ್ಯಕರ್ತೆ ರೂಪಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net