27ಕ್ಕೆ ತೊರವಿಯಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ

Free health checkup camp at Thoravi on 27th
Published on

ವಿಜಯಪುರ: ಡಾ. ಫ.ಗು. ಹಳಕಟ್ಟಿ, ಬಂಥನಾಳ ಸಂಗನಬಸವ ಶಿವಯೋಗಿಗಳು, ಡಾ. ಬಿ.ಎಂ. ಪಾಟೀಲ ಹಾಗೂ ಬಂಗಾರಮ್ಮ ಸಜ್ಜನ ಅವರ ಪುಣ್ಯಸ್ಮರಣೆ ಅಂಗವಾಗಿ ಜುಲೈ 27ರಂದು ತೊರವಿ ಗ್ರಾಮದ ಶ್ರೀಲಕ್ಷ್ಮೀ ದೇವಸ್ಥಾನದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಜು. 27ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ. ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಈ ಶಿಬಿರ ಆಯೋಜಿಸಲಾಗಿದ್ದು, ಶಿಬಿರಾರ್ಥಿಗಳಿಗೆ ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಔಷಧಿ ವಿತರಿಸಲಾಗುವುದು ಎಂದು ಬಿಎಲ್‌ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಎಸ್. ಮುಧೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಬಿರದಲ್ಲಿ ವೈದ್ಯಕೀಯ ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ವಿಭಾಗ, ಎಲುಬು ಮತ್ತು ಕೀಲು ಚಿಕಿತ್ಸಾ ವಿಭಾಗ, ಕಿವಿ, ಮೂಗು ಹಾಗೂ ಗಂಟಲು ವಿಭಾಗ, ಹೆರಿಗೆ ಮತ್ತು ಪ್ರಸೂತಿ ವಿಭಾಗ, ಚಿಕ್ಕಮಕ್ಕಳ ಚಿಕಿತ್ಸಾ ವಿಭಾಗ, ಚರ್ಮರೋಗ ಚಿಕಿತ್ಸಾ ವಿಭಾಗ, ನೇತ್ರ ಚಿಕಿತ್ಸಾ ವಿಭಾಗ, ಹೃದ್ರೋಗ ಚಿಕಿತ್ಸಾ ವಿಭಾಗ, ನರರೋಗ ಚಿಕಿತ್ಸಾ ವಿಭಾಗ ಹಾಗೂ ದಂತ ಚಿಕಿತ್ಸಾ ವಿಭಾಗದ ವೈದ್ಯರು ಶಿಬಿರಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಮೊಬೈಲ್ ಸಂಖ್ಯೆ- 9591682224 ಮತ್ತು 8951178777 ಸಂಪರ್ಕಿಸಬಹುದು ಎಂದು ಡಾ. ಆರ್.ಎಸ್. ಮುಧೋಳ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net