ಆರೋಗ್ಯ ಉಚಿತ ತಪಾಸಣಾ ಶಿಬಿರ ಇಂದು

Health camp
Published on

ಹಿರೀಸಾವೆ: ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಆದಿಚುಂಚನಗಿರಿ ಆಸ್ಪತ್ರೆ, ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಶಿಬಿರದಲ್ಲಿ ಹೃದ್ರೋಗ, ನರರೋಗ, ಮಧುಮೇಹ, ಕ್ಯಾನ್ಸರ್, ಕೀಲು ಮೂಳೆ ಹಾಗೂ ಚರ್ಮ ರೋಗ ಸೇರಿದಂತೆ ಹಲವು ರೋಗಗಳನ್ನು ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯ ತಜ್ಞ ವೈದ್ಯರು ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡಿ, ಉಚಿತವಾಗಿ ಔಷಧಗಳನ್ನು ವಿತರಣೆ ಮಾಡಲಿದ್ದಾರೆ.

ಕಾರ್ಯಕ್ರಮವನ್ನು ಶಾಸಕ ಸಿ.ಎನ್. ಬಾಲಕೃಷ್ಣ ಉದ್ಘಾಟಿಸುವರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬೋರಣ್ಣ, ಡಿಎಚ್‌ಒ ಡಾ.ಶಿವಸ್ವಾಮಿ, ಟಿಎಚ್‌ಒ ಡಾ. ಕಿಶೋರ್ ಕುಮಾರ್, ಪಿಡಿಒ ಸತೀಶ್ ಸೇರಿದಂತೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net