ಜಲಮಂಡಳಿ ಸಿಬ್ಬಂದಿಗೆ ಮೇ ತಿಂಗಳಲ್ಲಿ ಉಚಿತ ಆರೋಗ್ಯ ತಪಾಸಣೆ

BWSSB
Published on

ಬೆಂಗಳೂರು: ನಗರಕ್ಕೆ ನಿರಂತರವಾಗಿ ನೀರು ಸರಬರಾಜು ಮಾಡಲು ಹಾಗೂ ಜನರ ಸ್ವಾಸ್ಥ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ಜಲಮಂಡಳಿಯ ವಾಟರ್​ಮ್ಯಾನ್​, ಸ್ಯಾನಿಟರಿ ವರ್ಕರ್​, ಜೆಟ್ಟಿ ಡೆವರ್​ ಸೇರಿ ಎಲ್ಲ ಸಿಬ್ಬಂದಿಗೆ ಮಂಡಳಿ ವತಿಯಿಂದ ಮೇ ತಿಂಗಳಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್​ಪ್ರಸಾತ್​ ಮನೋಹರ್​ ತಿಳಿಸಿದ್ದಾರೆ.

ನಗರದ ಜಲಮಂಡಳಿ ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಜಲಮಂಡಳಿ ಸಿಬ್ಬಂದಿಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಮಿಕರು ಹಾಗೂ ಸಿಬ್ಬಂದಿಗಳೂ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಹೊಂದಬೇಕು. ಕಾರ್ಮಿಕರ ಆರೋಗ್ಯವನ್ನು ಸುಸ್ಥಿಯಲ್ಲಿಡುವ ದೃಷ್ಟಿಯಿಂದ ಪ್ರತಿ ವರ್ಷ ಮೇ ತಿಂಗಳಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ 300ಕ್ಕೂ ಹೆಚ್ಚು ಸಿಬ್ಬಂದಿಗಳು ಹಾಗೂ ಅವರ ಕುಟುಂಬದ ಸದಸ್ಯರು ಶಿಬಿರದ ಲಾಭ ಪಡೆದುಕೊಂಡರು. ಜಲಮಂಡಳಿ ನಿರ್ವಹಣಾ ವಿಭಾಗದ ಮುಖ್ಯ ಅಭಿಯಂತರರಾದ ಕುಮಾರ್​ ನಾಯ್ಕ್​, ಎಸ್​.ಈ. ದಲಾಯತ್​, ಕಾರ್ಯನಿರ್ವಾಹಕ ಇಂಜಿನಿಯರ್​ ಚನ್ನಬಸವರಾಜು ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net