ಹಿರಿಯ ನಾಗರಿಕರ ಉಚಿತ ಆರೋಗ್ಯ ತಪಾಸಣೆ

Healh New
Published on

ಹುಬ್ಬಳ್ಳಿ : ವಿಶ್ವ ತಂದೆಯ ದಿನದ ಅಂಗವಾಗಿ 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ನಗರದ ಶ್ರೀ ಬಾಲಾಜಿ ನರರೋಗ ಮತ್ತು ತುರ್ತು ಚಿಕಿತ್ಸಾ ಕೇಂದ್ರದ ವತಿಯಿಂದ ಎಲುಬು ಮತ್ತು ನರ ರೋಗಗಳಿಗೆ ಸಂಬಂಧಿಸಿದಂತೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜೂ.16ರಂದು ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿರುವ ಈ ಶಿಬಿರದಲ್ಲಿ ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸುವರು. ಆಸಕ್ತರು ತಮ್ಮ ಆಧಾರ್ ಕಾರ್ಡ್​ನೊಂದಿಗೆ ಆಗಮಿಸಿ, ಹೆಸರು ನೋಂದಾಯಿಸಬೇಕು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net