ಸಿದ್ದಾಪುರ: ನಲ್ವತ್ತೇಕರೆ ಶ್ರೀವಿನಾಯಕ ಸೇವಾ ಸಮಿತಿ ಹಾಗೂ ಶ್ರೀವಿನಾಯಕ ಮಿತ್ರ ಮಂಡಳಿ ವತಿಯಿಂದ ಸುಳ್ಯ ಕೆವಿಜಿ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದೊಂದಿಗೆ ಸಾರ್ವಜನಿಕರಿಗೆ ಮಾರ್ಚ್ 10ರಂದು ಆರೋಗ್ಯ ಉಚಿತ ತಪಾಸಣೆ, ಮಾಹಿತಿ ಕಾರ್ಯಗಾರ, ಉಚಿತ ಔಷಧ ವಿತರಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಶ್ರೀವಿನಾಯಕ ಸೇವಾ ಸಮಿತಿ ಕಾರ್ಯದರ್ಶಿ ಎಚ್.ಬಿ.ಅಕ್ಷಯ್ ತಿಳಿಸಿದರು.
ನೆಲ್ಯಹುದಿಕೇರಿ ಶಾದಿ ಮಹಲ್ ಸಭಾಂಗಣದಲ್ಲಿ ಶಿಬಿರ ಆಯೋಜಿಸಿದ್ದು, ಶಿಬಿರದಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗ, ಮಕ್ಕಳ ರೋಗ, ಇಎನ್‌ಟಿ, ನೇತ್ರ ಚಿಕಿತ್ಸೆ, ಚರ್ಮ ಮತ್ತು ಲೈಂಗಿಕ ರೋಗ, ಎಲುಬು ಮತ್ತು ಕೀಲುರೋಗ, ದಂತ ಚಿಕಿತ್ಸೆ, ಶ್ವಾಸಕೋಶ ಹಾಗೂ ತುರ್ತು ಚಿಕಿತ್ಸೆ ವಿಭಾಗ ಸೇರಿದಂತೆ ನುರಿತ 15 ವೈದ್ಯರು ಆರೋಗ್ಯ ತಪಾಸಣೆ ಮಾಡಿ, ಔಷಧ ವಿತರಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀವಿನಾಯಕ ಸೇವಾ ಸಮಿತಿ ಅಧ್ಯಕ್ಷ ಟಿ.ಆರ್.ಮಣಿ, ಸದಸ್ಯರಾದ ಟಿ.ಕೆ.ಮನೋಜ್, ಕೆ.ವಿ.ಪ್ರಭಾಕರ್, ಎ.ಬಿ.ಸತೀಶ್ ಮತ್ತಿತರರಿದ್ದರು.