ಉಚಿತ ಆರೋಗ್ಯ-ನೇತ್ರ ತಪಾಸಣಾ ಶಿಬಿರ

31 ckm 2
ಚಿಕ್ಕಮಗಳೂರು ತಾಲೂಕಿನ ಮಾಗಡಿ ಕೈಮರದ ಸರ್ಕಾರಿ ಆಯುರ್ವೇದ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಹಾಗೂ ಜಿಲ್ಲಾಡಳಿತದಿಂದ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರ ನಡೆಸಲಾಯಿತು.
Published on

ಚಿಕ್ಕಮಗಳೂರು: ಯಾವುದೇ ನಿಖರ ಕಾರಣವಿಲ್ಲದೇ ಬರುವ ಕಣ್ಣಿನ ಪೊರೆ ಸಮಸ್ಯೆಗೆ ಆರಂಭಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆದಲ್ಲಿ ಮುಂದಾಗುವ ಅನಾಹುತಗಳನ್ನು ತಡೆಯಬಹುದಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಇರುವ ಬಿಪಿಎಲ್ ಕುಟುಂಬಗಳಿಗೆ ಆರೋಗ್ಯ ಇಲಾಖೆಯ ಮೂಲಕ ಉಚಿತವಾಗಿ ಶಸ್ತçಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಈ ಬಗ್ಗೆ ಎಚ್ಚರಿಕೆ ವಹಿಸದಿದ್ದಲ್ಲಿ ಶಾಶ್ವತ ಅಂಧತ್ವ ಉಂಟಾಗಲಿದೆ ಎಂದು ವೈದ್ಯಾಧಿಕಾರಿ ಡಾ.ಸುಖರಾಮ್ ಶೆಟ್ಟಿ ತಿಳಿಸಿದರು.

ಲಯನ್ಸ್ ಕ್ಲಬ್ ಚಿಕ್ಕಮಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಅಂಧತ್ವ ನಿವಾರಣಾ ಘಟಕ ಮತ್ತು ಜಿಲ್ಲಾ ಸಂಚಾರಿ ನೇತ್ರ ಘಟಕದಿಂದ ತಾಲೂಕಿನ ಮಾಗಡಿ ಕೈಮರದ ಸರ್ಕಾರಿ ಆಯುರ್ವೇದ ಆರೋಗ್ಯ ಕೇಂದ್ರದಲ್ಲಿ ಶನಿವಾರ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು,
ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಪುಷ್ಪರಾಜ್ ಮಾತನಾಡಿ, ವಿಶ್ವದೆಲ್ಲೆಡೆ ಲಯನ್ಸ್ ಕ್ಲಬ್‌ನಿಂದ ಸೇವಾ ಕಾರ್ಯ ಮಾಡಲಾಗುತ್ತಿದೆ. ಸೇವೆಯನ್ನೇ ತನ್ನ ಧ್ಯೇಯವನ್ನಾಗಿ ಮಾಡಿಕೊಂಡು ಕೆಲಸ ಮಾಡುತ್ತಿರುವ ಲಯನ್ಸ್ ಸಂಸ್ಥೆ ಇಂತಹ ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದ ಬಡವರಿಗೆ ಉಚಿತ ಆರೋಗ್ಯದ ಸೌಲಭ್ಯ ದೊರಕಿಸಿಕೊಡುತ್ತಿದೆ ಎಂದು ಹೇಳಿದರು.
ಆರೋಗ್ಯ ಇಲಾಖೆಯ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವನಜಾಕ್ಷಿ ಮಾತನಾಡಿ, ಮನುಷ್ಯನ ದೇಹದಲ್ಲಿ ಅತ್ಯಂತ ಸೂಕ್ಷö್ಮ ಅಂಗವಾಗಿರುವ ಕಣ್ಣಿನ ರಕ್ಷಣೆ ಬಹಳ ಮುಖ್ಯ. ಯಾವುದೇ ವ್ಯಕ್ತಿ ಪೌಷ್ಠಿಕ ಆಹಾರ ಸೇವನೆಯಿಂದ ಕಣ್ಣಿನ ಸಮಸ್ಯೆಯನ್ನು ದೂರವಿಡಬಹುದು. ಇದರ ಜೊತೆಗೆ ಸೊಪ್ಪು, ತರಕಾರಿ, ಹಣ್ಣು, ಮೊಳಕೆ ಕಾಳುಗಳಂಥ ಪೌಷ್ಠಿಕಾಂಶಗಳುಳ್ಳ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಕಣ್ಣಿನ ರಕ್ಷಣೆ ಪಡೆಯಬಹುದಾಗಿದೆ ಎಂದರು.
ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಘೆ ಜ್ವರದ ಬಗ್ಗೆ ಗ್ರಾಮಾಂತರ ಪ್ರದೇಶದ ಜನರು ಜಾಗೃತರಾಗಬೇಕಾಗಿದೆ. ಸೊಳ್ಳೆಯಿಂದ ಹರಡುವ ಈ ರೋಗದ ನಿಯಂತ್ರಣಕ್ಕೆ ತಮ್ಮ ಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಶುಚಿತ್ವ ಕಾಪಾಡುವುದರಿಂದ ರೋಗ ನಿಯಂತ್ರಿಸಬಹುದಾಗಿದೆ. ಗ್ರಾಮಾಂತರ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಇವುಗಳ ಯಶಸ್ವಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಗೋಪಿಕೃಷ್ಣ, ಖಜಾಂಚಿ ಎಂ. ಗಿರೀಶ್, ಲಯನ್ಸ್ ಕ್ಲಬ್ ಜೋನಲ್ ಛರ‍್ಮನ್ ಬಿ.ಎನ್. ವೆಂಕಟೇಶ್, ಇಂದಿನ ಆರೋಗ್ಯ ತಪಾಸಣಾ ಶಿಬಿರದ ಸಂಯೋಜಕರಾದ ಲಯನ್ಸ್ ಎಸ್.ಆರ್. ವೈದ್ಯ, ನೇತ್ರಾಧಿಕಾರಿಗಳಾದ ಅಮೃತ, ಭೂಮಿಕ, ಸಮುದಾಯ ಆರೋಗ್ಯಾಧಿಕಾರಿ ಶ್ವೇತÀ, ಮಾಲಿನಿ, ಆರೋಗ್ಯ ಇಲಾಖೆಯ ಭಾರತಿ, ಸುವರ್ಣ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net