

ಚನ್ನರಾಯಪಟ್ಟಣ: ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೌಲಭ್ಯ ಸುಲಭವಾಗಿ ದೊರೆಯುವ ವ್ಯವಸ್ಥೆಯಾಗಬೇಕು ಎಂದು ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂ ಅಧ್ಯಕ್ಷ ಕಮಲೇಶ್ ಹೇಳಿದರು.
ಹೋಬಳಿಯ ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂ ಆವರಣದಲ್ಲಿ ಮಾತನಾಡಿದರು. ಆರೋಗ್ಯದಲ್ಲಿ ಏರುಪೇರಾದರೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಆಯುಷ್ಮಾನ್ ಆರೋಗ್ಯ ಕಾರ್ಡ್‌ನಿಂದ 5 ಲಕ್ಷ ರೂ.ವರೆಗೂ ಉಚಿತವಾಗಿ ಆರೋಗ್ಯ ಸೇವೆ ದೊರೆಯಲಿದ್ದು, ಪ್ರತಿಯೊಬ್ಬರೂ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳಬೇಕು. ಈ ಮೂಲಕ ಸರ್ಕಾರ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.