ಉಚಿತ ಹೃದ್ರೋಗ ತಪಾಸಣೆ ಶಿಬಿರ

Heart Health
Published on

ಹಿರೇಕೆರೂರ: ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಪಟ್ಟಣದ ಮಾಗನೂರ ಹೆಲ್ತ್ ಕೇರ್ ಆಶ್ರಯದಲ್ಲಿ ಸೆ.8 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉಚಿತ ಹೃದ್ರೋಗ ತಪಾಸಣೆ ಶಿಬಿರ ಆಯೋಜಿಸಲಾಗಿದೆ.

ಎದೆ ನೋವು, ರಕ್ತದ ಒತ್ತಡ, ಆಯಾಸ, ಎದೆಯಲ್ಲಿ ಉರಿ, ಉಸಿರಾಟದಲ್ಲಿ ತೊಂದರೆ, ಅತಿಯಾದ ಬೆವರುವಿಕೆ ಸೇರಿದಂತೆ ವಿವಿಧ ಲಕ್ಷಣಗಳ ಕುರಿತು ಖ್ಯಾತ ವೈದ್ಯರು ಶಿಬಿರದಲ್ಲಿ ತಪಾಸಣೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net