ಉಚಿತ ಹೃದ್ರೋಗ ತಪಾಸಣೆ ಶಿಬಿರ ಮೇ 31ರಂದು

Dr News
Published on

ಕುಮಟಾ: ಶ್ರೀರಾಮಚಂದ್ರಾಪುರಮಠದ ಸೇವಾಖಂಡದ ಯೋಗಕ್ಷೇಮ ವಿಭಾಗ, ಜನಪರ ಹೋರಾಟ ವೇದಿಕೆ ಹಾಗೂ ಇತರ ಸಂಘಟನೆಗಳ ಸಹಯೋಗದಲ್ಲಿ ತಾಲೂಕಾಸ್ಪತ್ರೆಯಲ್ಲಿ ಮೇ 31ರಂದು ಬೆಳಗ್ಗೆ 10-30ಕ್ಕೆ ಉಚಿತ ಹೃದಯ ರೋಗ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜನಪರ ಹೋರಾಟ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎಂ.ಜಿ. ಭಟ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ಮಂಗಳೂರಿನ ಶ್ರೀನಿವಾಸ ಆಸ್ಪತ್ರೆಯ ಹೆಸರಾಂತ ಹೃದಯರೋಗ ತಜ್ಞ ಡಾ. ಸುಬ್ರಹ್ಮಣ್ಯಂ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆವರೆಗೆ ಶಿಬಿರಾರ್ಥಿಗಳನ್ನು ತಪಾಸಿಸಿ ಸೂಕ್ತ ಸಲಹೆ, ಸೂಚನೆ ನೀಡುವರು. ವೈದ್ಯರು ಸೂಚಿಸಿದವರಿಗೆ ರಕ್ತದ ಒತ್ತಡ, ಇಸಿಜಿ, ಮಧುಮೇಹ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ಉಳಿದಂತೆ ತಾಲೂಕಾಸ್ಪತ್ರೆಯ ವೈದ್ಯಕೀಯ ತಂಡವೂ ಸಹಯೋಗ ನೀಡಲಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಯೋಗಕ್ಷೇಮ ವಿಭಾಗದ ಸತೀಶ ಭಟ್, ತಾಲೂಕಾಸ್ಪತ್ರೆ ವೈದ್ಯಾಧಿಕಾರಿ ಡಾ. ಗಣೇಶ ನಾಯ್ಕ, ಡಾ. ಶ್ರೀನಿವಾಸ ನಾಯಕ, ಟ್ಯಾಕ್ಸಿ ಚಾಲಕ-ಮಾಲೀಕರ ಸಂಘದ ಅಧ್ಯಕ್ಷ ನವೀನ ನಾಯ್ಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net