

ಯಾದಗಿರಿ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆ ಶಿಬಿರವನ್ನು ಶಹಾಪುರದ ತಾಲೂಕು ಆಸ್ಪತ್ರೆಯಲ್ಲಿ ಡಾ.ಯಲ್ಲಪ್ಪಗೌಡ ಹಾಗೂ ಡಾ.ಜಗದೀಶ ಉಪ್ಪಿನ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.
ಶಹಾಪುರದ ತಾಲೂಕು ಆಸ್ಪತ್ರೆಯಲ್ಲಿ ಇಂದು ಜನವರಿ 16ರ ಗುರುವಾರ ರಂದು ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತç ಚಿಕಿತ್ಸೆಕ್ಕೆ ಯಾದಗಿರಿ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಶರಣಪ್ಪ ಪಾಟೀಲ್ ಅವರು ಶಿಬಿರಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಿಬ್ಬಂದಿ ಹಾಗೂ ಇಲಾಖೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿ, ಇನ್ನಿತರರು ಉಪಸ್ಥಿತರಿದ್ದರು