ಮಾನಸಿಕ ರೋಗಿಗಳಿಗೆ ಉಚಿತ ಕಾನೂನು ಸೇವೆ ಸೌಲಭ್ಯ

Published on

ಹೆಚ್ಚುವರಿ ಜಿಲ್ಲಾ, ಸತ್ರ ನ್ಯಾಯಾಧೀಶ ಎಸ್​.ವಿ.ಕಾಂತರಾಜು ಮಾಹಿತಿ | ಭಯ,ಆತಂಕ ರ್ನಿಲಸದಂತೆ ಸಲಹೆ

ವಿಜಯವಾಣಿ ಸುದ್ದಿಜಾಲ ಚಿಕ್ಕಬಳ್ಳಾಪುರ

ಮಾನಸಿಕ ಆರೋಗ್ಯದ ಬಗ್ಗೆ ರ್ನಿಲಕ್ಷ$್ಯ ತೋರಬೇಡಿ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್​. ವಿ.ಕಾಂತರಾಜು ತಿಳಿಸಿದರು.

ತಾಲೂಕಿನ ನಂದಿ ವೈದ್ಯಕಿಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂ, ಜಿಲ್ಲಾ ಪೊಲೀಸ್​ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದಿಂದ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ನೆರವು ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಾನಸಿಕ ರೋಗಿಗಳಿಗೆ ಉಚಿತ ಕಾನೂನು ಸೇವೆ ನೀಡುವ ಸೌಲಭ್ಯವಿದೆ.ಅಲ್ಲದೇ ಯಾವುದೇ ನ್ಯಾಯಾಲಯದಲ್ಲಿ ಶುಲ್ಕವಿಲ್ಲದೆ ಉಚಿತವಾಗಿ ಅವರ ಪರವಾಗಿ ಪ್ರಕರಣ ನಡೆಸುವ ವ್ಯವಸ್ಥೆ, ವೈದ್ಯಕಿಯ ಸೌಲಭ್ಯ ಕಲ್ಪಿಸಿಕೊಡಲಾಗುತ್ತದೆ ಎಂದರು.

ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅರಿವು ಇರುವುದಿಲ್ಲ. ಮನಸ್ಸಿನ ಮೇಲೆ ಆಗುವ ಒತ್ತಡ, ಗೊಂದಲ, ನಿರಂತರ ಭಯ, ಆತಂಕವನ್ನು ಕೆಲವರು ರ್ನಿಲಸುತ್ತಾರೆ. ಹಾಗೆಯೇ ತೊಂದರೆಗೆ ಗುರಿಯಾಗುತ್ತಾರೆ ಎಂದರು.ಮಾನಸಿಕ ಆರೋಗ್ಯ ಮತ್ತು ಸಮಸ್ಯೆಗಳ ಬಗ್ಗೆ ಜನ ಜಾಗೃತಿ ಮೂಡಿಸುವ ಸಲುವಾಗಿ ಕಾನೂನು ಸೇವಾ ಪ್ರಾಧಿಕಾರದಿಂದ ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ.ಮಾನಸಿಕ ಆರೋಗ್ಯ ಕುರಿತು ಅರಿವು ಮೂಡಿಸುವ, ಮಾನಸಿಕ ರೋಗಕ್ಕೆ ತುತ್ತಾಗಿರುವ ವ್ಯಕ್ತಿಗಳ ಸಮಸ್ಯೆ ಆಲಿಸುವ, ಪರಿಹರಿಸುವ ಸಲುವಾಗಿ ಸಮಿತಿ ರಚಿಸಲಾಗಿದೆ ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್​ ಕುಮಾರ್​ ಮಾತನಾಡಿ, ಶರೀರದ ಕಾಯಿಲೆಗಳ ಮಾದರಿಯಲ್ಲಿ ಮಾನಸಿಕ ಕಾಯಿಲೆಗಳಲ್ಲೂ ನಾನಾ ಬಗೆಗಳಿವೆ. ಚಿತ್ತ ಚಂಚಲತೆ, ಚಿತ್ತ ವಿಕಲತೆ, ಮದ್ದು, ಮದ್ಯ ವ್ಯಸನ, ಬುದ್ಧಿ ಮಾಂದ್ಯತೆ, ಮಕ್ಕಳಲ್ಲಿ ಕಂಡು ಬರುವ ನಡವಳಿಕೆ ದೋಷಗಳು ಮತ್ತಿತರ ಮನಸ್ಸಿನ ಕಾಯಿಲೆಗಳು ಕಾಡುತ್ತವೆ. ಇವುಗಳನ್ನು ತಡೆಗಟ್ಟುವ ಮಾರ್ಗಗಳು, ಚಿಕಿತ್ಸಾ ಕ್ರಮಗಳ ಬಗ್ಗೆ ಸಮೀಪದ ಸರ್ಕಾರಿ ಆಸ್ಪತ್ರೆಗಳ ತ ವೈದ್ಯರ ಸಲಹೆ ಪಡೆದು ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಶಿಲ್ಪಾ, ನಂದಿ ವೈದ್ಯಕಿಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್​ ಡಾ.ಎಂ.ಎಲ್​.ಮಂಜುನಾಥ, ಮನೋವೈದ್ಯಕಿಯ ವಿಭಾಗದ ಮುಖ್ಯಸ್ಥ ಡಾ.ಬಿ.ಜಿ.ಹೇಮಂತ್​ ಕುಮಾರ್​, ಜಿಲ್ಲಾ ವಕೀಲರ ಸಂದ ಅಧ್ಯಕ್ಷ ಕೆ.ವಿ.ಅಭಿಲಾಷ್​, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಶಿವಕುಮಾರ್​, ಮನೋವೈದ್ಯರಾದ ಡಾ.ಜಿ.ಹೇಮಂತ್​ ಕುಮಾರ್​, ಡಾ.ಎ.ಲಾವಣ್ಯ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net