ಏ.2ರಂದು ಎಸ್‌ಡಿಎಂ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸಾ ಶಿಬಿರ

medical camp 12
Published on

ಬೆಳ್ತಂಗಡಿ: ಉಜಿರೆ ಎಸ್.ಡಿ.ಎಂ. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ.ಹೆಗ್ಗಡೆಯವರ ಆದೇಶದಂತೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಮತ್ತು ಡಿ.ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಸಂಧಿವಾತ ಮತ್ತು ಅಟೋಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಏ.2ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2.30ರವರೆಗೆ ನಡೆಯಲಿದೆ.

ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ.ಶಿವರಾಜ್ ಪಡಿಯಾರ್ ಮತ್ತು ಡಾ.ಪ್ರತ್ಯೂಷ ಮಣಿಕುಪ್ಪಂ ಭಾಗವಹಿಸಲಿದ್ದಾರೆ. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ, ಆರ್ಥ್ರೈಟಿಸ್, ಸ್ಟಾಂಡಿಲೋಆರ್ಥ್ರೈಟಿಸ್, ಸಿಸ್ಟಮಿಕ್ ಲೂಪಸ್‌ಎರಿಥೆಮಾಟೋಸಸ್, ಸೋರಿಯಾಸಿಸ್, ವ್ಯಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಶಿಬಿರದಲ್ಲಿ ಭಾಗವಹಿಸಬಹುದು.

ಉಚಿತ ಸಮಾಲೋಚನೆಯ ಜತೆಗೆ ರಕ್ತ ಪರೀಕ್ಷೆ ಹಾಗೂ ಔಷಧಗಳಿಗೆ ಶೇ.10 ರಿಯಾಯಿತಿ ಪಡೆಯಬಹುದಾಗಿದೆ. ಹೆಸರು ನೊಂದಾಯಿಸಿಕೊಳ್ಳಲು 7760397878, 9972000438 ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net