ಚಾರ್ಮಾಡಿಯಲ್ಲಿ ಬೃಹತ್ ವೈದ್ಯಕೀಯ ಶಿಬಿರ

camp
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕೆಎಂಸಿ ಆಸ್ಪತ್ರೆ, ಅತ್ತಾವರ ಮಂಗಳೂರು ಮತ್ತು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ವತಿಯಿಂದ ಹಾಗೂ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ(ಎಸ್‌ಎನ್‌ಡಿಪಿ), ತೋಟತ್ತಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಚಾರ್ಮಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಹಾಗೂ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ಚಾರ್ಮಾಡಿ ಜಂಟಿ ಸಹಯೋಗದೊಂದಿಗೆ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ ಚಾರ್ಮಾಡಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.

ಸಂಘದ ಉಪಾಧ್ಯಕ್ಷ ಭಗೀರಥ ಜಿ.ಅಧ್ಯಕ್ಷತೆ ವಹಿಸಿದ್ದರು. ಚಾರ್ಮಾಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಶಾರದಾ ಐ.ಮಾತನಾಡಿರು. ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬಗ್ಗೆ ಮಾಹಿತಿಯನ್ನು ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡೆತ್ಯಾರು ನೀಡಿದರು. 250ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು.

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಯಶೋಧರ ಚಾರ್ಮಾಡಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಅಧ್ಯಕ್ಷ ಸನತ್ ಕುಮಾರ್ ಹಾಗೂ ಚಾರ್ಮಾಡಿಯ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಪ್ರಕಾಶ್ ಹೊಸ್ಮಠ, ಚಾರ್ಮಾಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಕೇಂದ್ರ ಕಚೇರಿಯ ಹಿರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಹಿರಿಯ ವ್ಯವಸ್ಥಾಪಕ ರೂಪಲತಾ, ಆಂತರಿಕ ಲೆಕ್ಕಪರಿಶೋಧಕ ಶರತ್ ಕುಮಾರ್, ಇತರ ಶಾಖೆಗಳ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ನಿರೂಪಿಸಿ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ಸುರೇಶ್ ಸ್ವಾಗತಿಸಿ, ಕಕ್ಕಿಂಜೆ ಶಾಖಾ ವ್ಯವಸ್ಥಾಪಕ ಜಾರಪ್ಪ ಪೂಜಾರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net