ಜು.7ರಂದು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

arogya
Published on

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಉಪ್ಪಿನಂಗಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ, ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ ಉಪ್ಪಿನಂಗಡಿ, ಜೇಸಿಐ ಉಪ್ಪಿನಂಗಡಿ ಇವರ ಸಹಯೋಗದೊಂದಿಗೆ ಜು.7 ರಂದು ಹಲಸು ಹಬ್ಬ ಕಾರ್ಯಕ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್ ದೇರಳಕಟ್ಟೆ ಇವರ ನುರಿತ ವೈದರ ತಂಡದವರಿಂದ ಸಾಮಾನ್ಯ ವೈದ್ಯಕೀಯ ಪರೀಕ್ಷೆ, ಮಧುಮೇಹ ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ,ಕೀಲು ಮತ್ತು ಗಂಟು ನೋವು ತಪಾಸಣೆ, ಮೂಲವ್ಯಾದಿ ತಪಾಸಣೆ, ಸ್ತ್ರೀರೋಗ ಮತ್ತು ಪ್ರಸೂತಿ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೌಲಭ್ಯವಿರುವುದು. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net