ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ ಉಚಿತ ವಿತರಣೆ

kota
Published on

ಕೋಟ: ಕೋಟ ಮೂರ್ತೆದಾರರ ಸಹಕಾರಿ ಸಂ ವತಿಯಿಂದ ಸಂದ ಸದಸ್ಯರ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣಾ ಸವಾರಂಭ ಸಂದ ಕೇಂದ್ರ ಕಚೇರಿಯ ಎಸ್.ಬಂಗಾರಪ್ಪ ಸಭಾಭವನದಲ್ಲಿ ಜರುಗಿತು.

ಸಂದ ಅಧ್ಯಕ ಕೆ.ಕೊರಗ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. 200 ಮಂದಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕ ವಿತರಿಸಲಾಯಿತು. ಸಂದ ಉಪಾಧ್ಯಕ್ಷ ಜಯರಾಮ ಪೂಜಾರಿ, ವಾಜಿ ಅಧ್ಯಕ್ಷರಾದ ರಾಜು ಪೂಜಾರಿ, ಪಿ.ಕೃಷ್ಣ ಪೂಜಾರಿ, ನಿರ್ದೇಶಕರಾದ ಜಿ.ಸಂಜೀವ ಪೂಜಾರಿ, ರಾಮ ಪೂಜಾರಿ, ಮಂಜುನಾಥ ಪೂಜಾರಿ, ಕೃಷ್ಣ ಪೂಜಾರಿ ಪಿ. ಕೋಡಿ ಕನ್ಯಾಣ, ಪ್ರಭಾವತಿ, ಭಾರತಿ, ಸಹಾಯಕ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಜಿ.ಕೃಷ್ಣ ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಾಧಿಕಾರಿ ಜಗದೀಶ್ ಕೆಮ್ಮಣ್ಣು ಸ್ವಾಗತಿಸಿದರು. ಹಿರಿಯ ವ್ಯವಸ್ಥಾಪಕ ದಿನೇಶ್ ಪೂಜಾರಿ ವಂದಿಸಿದರು. ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀದೇವಿ ಕಲ್ಕೂರ ಪ್ರಾರ್ಥಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net