ಸಾಕುಪ್ರಾಣಿಗಳ ಆರೋಗ್ಯಕ್ಕೂ ಆದ್ಯತೆ : ಸಾಯಿನಾಥ ಶೆಟ್ಟಿ ಹೇಳಿಕೆ

New Project (54)
Published on

ಕಿನ್ನಿಗೋಳಿ: ಸಾಕುಪ್ರಾಣಿಗಳಿಗೆ ಕಾಲಕಾಲಕ್ಕೆ ಲಸಿಕೆ ನೀಡುವುದರಿಂದ ಅದರ ಆರೋಗ್ಯ ಕಾಪಾಡಿಕೊಳ್ಳಬಹುದು. ಮನುಷ್ಯ ತನ್ನ ಆರೋಗ್ಯದಂತೆ ಅವುಗಳ ಆರೋಗ್ಯದತ್ತ ಗಮನ ಹರಿಸಬೇಕು ಎಂದು ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಸಾಯಿನಾಥ ಶೆಟ್ಟಿ ಹೇಳಿದರು.

ಜನನಿ ಜನಸೇವಾ ಸಂಸ್ಥೆ ಉಲ್ಲಂಜೆ, ಪಶುಪಾಲನಾ ಪಶು ವೈದ್ಯಕೀಯ ಸೇವಾ ಇಲಾಖೆ ಪಶು ಆಸ್ಪತ್ರೆ, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ, ರೋಟರಿ ಕ್ಲಬ್ ಕಿನ್ನಿಗೋಳಿ ವತಿಯಿಂದ ಶ್ವಾನ ಮತ್ತು ಬೆಕ್ಕುಗಳಿಗೆ ರೇಬಿಸ್ ಉಚಿತ ಲಸಿಕಾ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಉಲ್ಲಂಜೆಯಲ್ಲಿ ಚಾಲನೆ ನೀಡಿ ಮಾತನಾಡಿದರು.

ಶ್ರೀ ಕ್ಷೇತ್ರ ಉಲ್ಲಂಜೆಯ ಧರ್ಮದರ್ಶಿ ಹರೀಶ್ ಪೂಜಾರಿ, ಕೊಡೆತ್ತೂರು ಅರಸು ಕುಂಜಿರಾಯ ದೈವಸ್ಥಾನದ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ಸ್ವರಾಜ್ ಶೆಟ್ಟಿ ಮುಂಡ್ಕೂರು ದೊಡ್ದಮನೆ, ಬರ್ಕೆ ಫ್ರೆಂಡ್ಸ್‌ನ ಅಧ್ಯಕ್ಷ ಪ್ರೇಮ್‌ರಾಜ್ ಶೆಟ್ಟಿ ಬರ್ಕೆ, ತಿಮಪ್ಪ, ಯಶೋಧರ, ಗಿರೀಶ್ ಮಡಿವಾಳ, ನವೀನ್ ಕುಲಾಲ್, ಪೃಥ್ವಿ ಉಲ್ಲಂಜೆ, ಪ್ರಮೀಳಾ ಮತ್ತಿತರರು ಉಪಸ್ಥಿತರಿದ್ದರು.

ಪಶುವೈದ್ಯ ವಿಶ್ವರಾದ್ಯ ಅವರನ್ನು ಸನ್ಮಾನಿಸಲಾಯಿತು. ಪ್ರಕಾಶ್ ಆಚಾರ್ಯ ಸ್ವಾಗತಿಸಿದರು. ಕಾವ್ಯ ಕೊಡೆತ್ತೂರು ವಂದಿಸಿದರು. ಶರತ್ ಶೆಟ್ಟಿ ಕಿನ್ನಿಗೋಳಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net