ಉಚಿತವಾಗಿ ಹೊಲಿಗೆ ಯಂತ್ರ, ಲ್ಯಾಪ್‌ಟಾಪ್ ವಿತರಣೆ

17
Published on

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಚಾಮುಂಡಿಪುರಂನ ವಾರ್ಡ್ ಸಂಖ್ಯೆ 55ರ ಮಹಿಳೆಯರಿಗೆ ಬಿಜೆಪಿಯಿಂದ ಉಚಿತವಾಗಿ ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಉಚಿತ ಪುಸ್ತಕ, ಅಂಗವಿಕಲರಿಗೆ ಔಷಧಗಳನ್ನು ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಜನಸಂಘದಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಯಡಿಯೂರಪ್ಪ ಅವರು, ರೈತರ ಪರವಾದಂತಹ ಹೋರಾಟಗಳನ್ನು ಮಾಡಿದರು. ಅವರ ನೇತೃತ್ವದಲ್ಲಿ ದಕ್ಷಿಣ ಭಾರತದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಮೂಲ ಕಾರಣಕರ್ತರಾಗಿದ್ದಾರೆ ಎಂದರು.

ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದರು. ಅವರು ಭಾಗ್ಯಲಕ್ಷ್ಮಿ ಯೋಜನೆ, ರೈತರಿಗೆ ಉಚಿತವಾಗಿ ವಿದ್ಯುತ್ ನೀಡಿದರು. ಅಲ್ಲದೆ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನ ಮನ್ನಣೆ ಪಡೆದಿದ್ದಾರೆ ಎಂದು ಬಣ್ಣಿಸಿದರು.

ನಗರಪಾಲಿಕೆ ಮಾಜಿ ಸದಸ್ಯ ಮಾ.ವಿ.ರಾಮಪ್ರಸಾದ್, ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷ ಗೋಪಾಲ ರಾಜೇಅರಸ್, ಬಿಜೆಪಿ ನಗರ ಕಾರ್ಯದರ್ಶಿಗಳಾದ ಮಹೇಶ್, ಉಮಾಶಂಕರ್, ವಿದ್ಯಾ ಅರಸ್, ಮುಖಂಡರಾದ ಪುರುಷೋತ್ತಮ್, ಮಂಜುನಾಥ್, ಸೋಮೇಶ್, ಮಂಜುಳಾ, ವಿಕ್ರಮ ಅಯ್ಯಂಗಾರ್, ಅರವಿಂದ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net