ಜನರಿಗೆ ಸ್ವ-ಉದ್ಯೋಗಕ್ಕೆ ಅವಕಾಶ : ಪ್ರತಿಮಾ ಹೇಳಿಕೆ

New Project
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಜನರಿಗೆ ಸ್ವ-ಉದ್ಯೋಗ ಮಾಡುವ ಅವಕಾಶ ಕಲ್ಪಿಸಿಕೊಟ್ಟರುವುದು ಸಂತೋಷದ ವಿಷಯ. ಕಲಿತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯಕ್ಷೆ ಪ್ರತಿಮಾ ಹೇಳಿದರು.

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಅರಸಿನಮಕ್ಕಿ ಶಿವಾನಿ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟ ಸಹಭಾಗಿತ್ವದಲ್ಲಿ ನೇಲ್ಯಡ್ಕದಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ 32ನೇ ಟೈಲರಿಂಗ್ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ಸಿಇಒ ಸ್ವರ್ಣಗೌರಿ, ಟೈಲರಿಂಗ್ ತರಬೇತುದಾರ ಹರಿಣಾಕ್ಷಿ ಬಿ.ಪಿ. ಮಾತನಾಡಿದರು. ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಅರಸಿನಮಕ್ಕಿ ಗ್ರಾಪಂ ಮಾಜಿ ಅಧ್ಯಕ್ಷ ನವೀನ ರೆಖ್ಯಾ, ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ನೀತಾ ರಾಧೇಶ್ ಆಚಾರ್ಯ, ರೆಖ್ಯಾ ಮಾಜಿ ಅಂಗನವಾಡಿ ಕಾರ್ಯಕರ್ತೆ ಮಾಲತಿ, ಸಂಪನ್ಮೂಲ ವ್ಯಕ್ತಿ ಹೇಮಲತಾ, ಅಮಿತ ಉಪಸ್ಥಿತರಿದ್ದರು. ಒಟ್ಟು 34 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಹೇಮಲತಾ ಸ್ವಾಗತಿಸಿದರು. ಡಾಕ್ಯುಮೆಂಟೇಶನ್, ಮಾನಿಟರಿಂಗ್, ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿದರು. ಸ್ವಾತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net