

ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ಯೋಜನೆಗಳು ಕಡಿಮೆಯಾದರೂ, ಇರುವ ತಾಣಗಳ ಅಭಿವೃದ್ಧಿಗೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಟೂರಿಸಂ ಸರ್ಕ್ಯೂಟ್ ಅಭಿವೃದ್ಧಿಯಿಂದ ಹಿಡಿದು, ಮಿನಿ ಮೃಗಾಲಯದವರೆಗೆ ಗಮನ ಹರಿಸಲಾಗಿದೆ. ರೈಲ್ವೆ ಇಲಾಖೆ ಸಹಕಾರದೊಂದಿಗೆ ಹಿರಿಯ ನಾಗರಿಕರಿಗಾಗಿ ರೂಪಿಸಿರುವ ಜೀವನ ಚೈತ್ರ ಯಾತ್ರೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ. ಮೀಸಲು.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಹಾಗೂ ರೈಲ್ವೆ ಇಲಾಖೆಯ ಸಹಯೋಗದೊಂದಿಗೆ ರಾಜ್ಯದಲ್ಲಿರುವ 60 ವರ್ಷ ಮೇಲ್ಪಟ್ಟ ಬಡತನ ರೇಖೆಗಿಂತ ಕೆಳಗಿರುವ ಆಯ್ದ ಫಲಾನುಭವಿ ಗಳಿಗೆ ಉಚಿತವಾಗಿ ರಾಜ್ಯ ಹಾಗೂ ದೇಶದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ತೆರಳಲು ಅನುವಾಗುವಂತೆ ‘ಜೀವನ ಚೈತ್ರ ಯಾತ್ರೆ’ ಯೋಜನೆ ಜಾರಿಗೊಳಿಸಲು 20 ಕೋಟಿ ರೂ. ಅನುದಾನ ನಿಗದಿ.