ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

KPSC
Published on

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಜಿ.ಎಂ.ಆರ್. ವರಲಕ್ಷ್ಮೀ ಫೌ0ಡೇಷನ್ ಸಹಯೋಗದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪದವಿ ಅಂತಿಮ ತರಗತಿಯಲ್ಲಿ ಓದುತ್ತಿರುವ ಮತ್ತು ಪದವಿ ಪೂರ್ಣಗೊಳಿಸಿದ ಆಸಕ್ತ ವಿದ್ಯಾರ್ಥಿಗಳಿಗಾಗಿ ಕೇಂದ್ರ ಮತ್ತು ರಾಜ್ಯ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ನಗರದ ಗೋಕುಲ ರಸ್ತೆಯ ಎಸ್.ಆರ್. ಬೊಮ್ಮಾಯಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂರು ತಿಂಗಳು ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ. ಪ್ರವೇಶಕ್ಕಾಗಿ ಅರ್ಹತಾ ಪರೀಕ್ಷೆಯನ್ನು ಏರ್ಪಡಿಸಿ ಅಗತ್ಯ ಸಂಖ್ಯೆಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿಯುದ್ದಕ್ಕೂ ವಿವಿಧ ಕ್ಷೇತ್ರಗಳಲ್ಲಿನ ಸಾಧಕರು ಮತ್ತು ಆಧಿಕಾರಿಗಳಿಂದ ತರಗತಿಗಳನ್ನು ನಡೆಸಿ, ವಿಶೇಷ ಪರೀಕ್ಷೆ ಮತ್ತು ಮಾಕ್ ಟೆಸ್ಟ್‌ಗಳನ್ನು ತೆಗೆದುಕೊಳ್ಳಲಾಗುವುದು. ಐಎಎಸ್ ಮತ್ತು ಐಪಿಎಸ್, ಕೆಎಎಸ್ ಹೀಗೆ ವಿವಿಧ ಪರೀಕ್ಷೆಗಳನ್ನು ಬರೆದು ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಆಹ್ವಾನಿಸಿ, ಅವರ ಅನುಭವ ಮತ್ತು ಸಲಹೆಗಳನ್ನು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿಯನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net