

ಮೈಸೂರು: ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಹಾಗೂ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ 10 ದಿನಗಳ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನ.2ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ದಾಖಲಾತಿಯೊಂದಿಗೆ ಉಚಿತ ತರಬೇತಿಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ ಎನ್.ಆರ್.ಮೊಹಲ್ಲಾ ಇವರನ್ನು ಸಂಪರ್ಕಿಸಬಹುದು. ಅಥವಾ ದೂ: 0821-2489972 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.