ಹುಬ್ಬಳ್ಳಿ: ದ್ವೀತಿಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ವಾಯವ್ಯ ಸಾರಿಗೆ ಸಂಸ್ಥೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆಯ ಬಸ್ ಬಳಸಬಹುದು.
ಪರೀಕ್ಷೆ ನಡೆಯುವ ದಿನಾಂಕಗಳಂದು ಪ್ರವೇಶ ಪತ್ರ ತೋರಿಸಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ಪರೀಕ್ಷೆ ಮುಗಿಸಿ ವಾಪಸ್ ಬರಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.