ಸಾರ್ವಜನಿಕರಿಗೆ ಉಚಿತ ನೀರು ಪೂರೈಕೆ

Published on

ಹಗರಿಬೊಮ್ಮನಹಳ್ಳಿ: ಪಟ್ಟಣದ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಉಚಿತವಾಗಿ ಪೂರೈಸಲು ನಿರ್ಧರಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಎಂ.ಮರಿ ರಾಮಣ್ಣ ತಿಳಿಸಿದರು.

ಪಟ್ಟಣದ ಪುರಸಭೆಯಲ್ಲಿ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಈಗಾಗಲೇ ಬಿಸಿಲು ಆರಂಭವಾಗಿದ್ದು, ವಿಶ್ವಜಲ ದಿನ ಹಿನ್ನೆಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪುರಸಭೆ ವ್ಯಾಪ್ತಿಯ 23ವಾರ್ಡ್‌ಗಳಲ್ಲಿ ಏ.1ರಿಂದ ಮೇ 30ರವರೆಗೂ ಸಾರ್ವಜನಿಕರಿಗೆ ಉಚಿತ ನೀರು ಪೂರೈಸಲಾಗುವುದು.

ಒಟ್ಟು 21ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು ಪ್ರತಿದಿನ ಒಂದು ಘಟಕದಿಂದ ಒಂದು ಸಾವಿರ ಲೀಟರ್ ನೀರು ಉಚಿತವಾಗಿ ನೀಡುವ ಯೋಜನೆ ಇದಾಗಿದೆ ಎಂದರು. ಕೆಲವು ದಿನಗಳಲ್ಲಿ ಪಟ್ಟಣದಲ್ಲಿನ ಖಾಸಗಿ ಶುಧ್ಧ ಕುಡಿಯುವ ನೀರಿನ ಘಟಕಗಳಿಂದಲೂ ಸಾರ್ವಜನಿಕರಿಗೆ ಉಚಿತ ನೀರು ನೀಡುವ ಬಗ್ಗೆ ಸಭೆ ನಡೆಸಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಬರ ಬಾರದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಪುರಸಭೆ ಮುಖ್ಯಾಧಿಕಾರಿ ಕೆ.ಎಂ.ಮುಗಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net