ಹುಬ್ಬಳ್ಳಿ: ಇಲ್ಲಿಯ ವಿದ್ಯಾನಗರ ಶ್ರೀ ರಂಭಾಪುರಿ ಜಗದ್ಗುರು ವೀರಗಂಗಾಧರ ಸಮುದಾಯ ಭವನದಲ್ಲಿ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ 69ನೇ ಜನ್ಮದಿನಾಚರಣೆ ಅಂಗವಾಗಿ ಜ. 10ರಿಂದ 23ರ ವರೆಗೆ ಉಚಿತ ಯೋಗ ಶಿಬಿರ ಆಯೋಜಿಸಲಾಗಿದೆ.
ಜಗದ್ಗುರು ರಂಭಾಪುರೀಶ ಸಾಂಸ್ಕೃತಿಕ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಶಿಬಿರವನ್ನು ಜ. 10ರಂದು ಬೆಳಗ್ಗೆ 6.30ಕ್ಕೆ ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿಗಳ ಸಾನ್ನಿಧ್ಯದಲ್ಲಿ ತಹಸೀಲ್ದಾರ್ ಕಲಗೌಡ ಪಾಟೀಲ ಉದ್ಘಾಟಿಸುವರು. ಸನಾತನ ಸಂಸ್ಕೃತಿ ಯೋಗ ವಿದ್ಯಾಕೇಂದ್ರದ ಸಂಸ್ಥಾಪಕ ಚೇರ್ಮನ್ ಅಶೋಕ ಬದಾಮಿ ಅತಿಥಿಗಳಾಗಿ ಪಾಲ್ಗೊಳ್ಳುವರು.
ಹಳೇಹುಬ್ಬಳ್ಳಿಯ ಆರೂಢ ಯೋಗ ಕೇಂದ್ರದ ಯೋಗಗುರು ಪಂಚಲಿಂಗಪ್ಪ ಕವಲೂರ ಅವರು ಶಿಬಿರ ನಡೆಸಿಕೊಡುವರು. ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆಯಬೇಕೆಂದು ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಹಿರೇಗೌಡರ ಕೋರಿದ್ದಾರೆ.