

ಕಲಬುರಗಿ: ಕಲಬುರಗಿ ನಗರದ ಗುಬ್ಬಿ ಕಾಲೋನಿಯಲ್ಲಿರುವ
ಶ್ರೀಮತಿ ಇಂದುಮತಿ ಚಾರಿಟೇಬಲ್ ಟ್ರಸ್ಟ್ (ರಿ) ಅಡಿಯಲ್ಲಿ ನಡೆಸಲಾಗುತ್ತಿರುವ ಮನಸ್ವಿನಿ ವಿಶೇಷ ಮಕ್ಕಳ ಶಾಲೆಯಲ್ಲಿ ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಟ್ರಸ್ಟ್ ಕಾರ್ಯದರ್ಶಿ ಸುರೇಶ್ ಎಸ್. ಹತ್ತಿ ಅವರು ಧ್ವಜಾರೋಹಣ ನೆರವೇರಿಸಿದರು. ಟ್ರಸ್ಟ್ ಅಧ್ಯಕ್ಷ ರಮೇಶ ಹತ್ತಿ, ರಿತೇಶ್ ಹತ್ತಿ, ಡಾ.ರೇಣುಕಾ ಬಗಾಲೆ ಹಾಗೂ ಶಾಲೆಯ ಪ್ರಾಂಶುಪಾಲರಾದ ಆಶಾ ನಿಪ್ಪಾಣಿ, ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.