ಸ್ವಾತಂತ್ರ್ಯ ಹೋರಾಟಗಾರರನ್ನು ಎಂದಿಗೂ ಮರೆಯಬಾರದು

blm
Published on

ಕಾರ್ಕಳ: ಬ್ರಿಟಿಷರ ಆಳ್ವಿಕೆಯು ನಮ್ಮ ದೇಶವನ್ನು ಹಿಂದುಳಿದ ದೇಶವನ್ನಾಗಿಸಿತು. 1947 ರಿಂದ ಇಂದಿನವರೆಗೆ 78 ವರ್ಷಗಳಲ್ಲಿ ದೇಶ ಗಮನಾರ್ಹ ಬೆಳವಣಿಗೆ ಕಂಡಿದೆ. ಇದಕ್ಕೆ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವೇ ಕಾರಣವೆಂಬುದನ್ನು ನಾವು ಎಂದಿಗೂ ಮರೆಯಬಾರದು ಎಂದು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಪ್ರಶಾಂತ್ ಕುವಾರ್ ಹೇಳಿದರು.

ನಿಟ್ಟೆ ಕ್ಯಾಂಪಸ್‌ನಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ವಾತನಾಡಿದರು.

ನಿಟ್ಟೆ ಸಮೂಹ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರು, ನಿರ್ದೇಶಕರು, ಉಪಪ್ರಾಂಶುಪಾಲರು, ವಿವಿಧ ವಿಭಾಗ ಮುಖ್ಯಸ್ಥರು, ಕಾಲೇಜಿನ ಸುರಕ್ಷತಾ ಸಿಬ್ಬಂದಿವರ್ಗ, ಪ್ರಾಧ್ಯಾಪಕರು, ಬೊಧಕೇತರ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ .ಪ್ಳೂಣ್ಕರ್ ಸ್ವಾಗತಿಸಿದರು. ಡಾ.ಶ್ರೇಯಾ ಕಾಂತ್ ವಂದಿಸಿದರು. ಡಾ.ಶಿವಪ್ರಸಾದ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net