ಕಾಂಗ್ರೆಸ್‌ನಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ- ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಆರೋಪ

ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್
ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್
Published on

ಮಂಗಳೂರು: ಬಜರಂಗದಳದ ಕಾರ್ಯಕರ್ತರನ್ನು ಗಡಿಪಾರು ಮಾಡುವುದರ ಮುಖಾಂತರ ಹಿಂದುತ್ವದ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಪೊಲೀಸ್ ಇಲಾಖೆಯ ಕ್ರಮವನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಹೇಳಿದರು.

ಕಾಂಗ್ರೇಸ್ ಅಧಿಕಾರದಿಂದ ಹಿಂದುಗಳ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಸರ್ಕಾರದಿಂದ ಹಿಂದೂ ಕಾರ್ಯಕರ್ತರ ಶಕ್ತಿಯನ್ನು ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತದೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿ, ಸುಳ್ಳು ಆರೋಪ ಹೊರಿಸಿ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಹಿಂದು ಕಾರ್ಯಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ. ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿಶ್ವ ಹಿಂದೂ ಪರಿಷದ್ ಬಲವಾಗಿ ಖಂಡಿಸುತ್ತದೆ. ಕಾಂಗ್ರೆಸ್ ಸರ್ಕಾರವು ಹಿಂದುತ್ವದ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದರೆ ಮುಂದಿನ ದಿನಗಳಲ್ಲಿ ಹಿಂದೂ ಕಾರ್ಯಕರ್ತರು ಸರ್ಕಾರಕ್ಕೆ ದಿಟ್ಟ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net